ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ಕಾಂಗ್ರೆಸ್ ಮುಖಂಡರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಗಮ, ಮಂಡಳಿಗಳ 34 ಮಂದಿ ಅಧ್ಯಕ್ಷರು, 11 ಉಪಾಧ್ಯಕ್ಷರ ನೇಮಕ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಗುರುವಾರ ಟಿಪ್ಪಣಿ ನೀಡಿದ್ದು, ಇದರ ಆಧಾರದ ಮೇಲೆ ಶುಕ್ರವಾರ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸಿಎಸ್ ಪತ್ರ ಬರೆದಿದ್ದಾರೆ. ನಿಮ್ಮ ಇಲಾಖೆಗಳಿಗೆ ಸಂಬಂಧಿಸಿದ ನಿಗಮ ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕಾತಿ ಮಾಡಿ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ. ಅಂತೆಯೇ 34 ಮಂದಿ ಅಧ್ಯಕ್ಷರು ಹಾಗೂ 11 ಮಂದಿ ಉಪಾಧ್ಯಕ್ಷರನ್ನು ನಿಗಮ, ಮಂಡಳಿಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.





