ಬೆಳಗಾವಿ : 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.
ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ರಾವಸಾಹೇಬ ಮಿರ್ಜಿಗೆ ಎಂಬಾತನಿಗೆ ಕೋರ್ಟ್ ಗಲ್ಲು ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲೆಯ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಚಾಕೊಲೇಟ್ ಆಮಿಷ ತೋರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿ ಬಾವಿಗೆ ಎಸೆದಿದ್ದರು. ಈ ಸಂಬಂಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.