ಶಿವಮೊಗ್ಗ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಸಮೀಕ್ಷೆಯ ಸಮನ್ವಯಾಧಿಕಾರಿ ಎಂ. ರಂಗನಾಥ್ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಹೊಸನಗರ ತಾಲೂಕು ಬಿ.ಆರ್.ಸಿ. ಕೇಂದ್ರ ಕ್ಷೇತ್ರ ಸಮನ್ವಯಾಧಿಕಾರಿ ಎಂ. ರಂಗನಾಥ್ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಪೂರ್ವಾನುಮತಿ ಪಡೆಯದೇ ರಜೆ ಅರ್ಜಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಟಪಾಲು ವಿಭಾಗಕ್ಕೆ ನೀಡಿ ರಂಗನಾಥ್ ಹೇಳಿದ್ದರು. ದೂರವಾಣಿ ಕರೆಗೂ ಸ್ಪಂದಿಸಿರಲಿಲ್ಲ. ತಹಶೀಲ್ದಾರ್ ಕಾರಣ ಕೇಳಿ ನೋಟಿಸ್ ನೀಡಿದ್ದರೂ ಪ್ರತಿಕ್ರಿಯೆ ನೀಡಿರಲಿಲ್ಲ.
ರಂಗನಾಥ್ ಅನಧಿಕೃತವಾಗಿ ಗೈರು ಹಾಜರಾಗಿದ್ದರಿಂದ ಗಣತಿದಾರ ಶಿಕ್ಷಕರನ್ನು ಸಮೀಕ್ಷೆಗೆ ನೇಮಕ ಮಾಡಲು ಸಾಧ್ಯವಾಗಿಲ್ಲ. ಮೇಲ್ವಿಚಾರಕರು ಮತ್ತು ಗಣತಿದಾರರ ನೇಮಕ ಮಾಡುವಲ್ಲಿ ಗೊಂದಲ ಉಂಟಾಗಿದ್ದರಿಂದ ಮೇಲಾಧಿಕಾರಿಗಳು ಕರೆ ಮಾಡಿದರೂ ರಂಗನಾಥ್ ಸ್ಪಂದಿಸದ ಹಿನ್ನೆಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ ತೊಡಕಾಗಿದೆ. ಹೀಗಾಗಿ ರಂಗನಾಥ್ ಅವರನ್ನು ಕರ್ತವ್ಯ ಲೋಪದ ಮೇಲೆ ಅಮಾನತು ಮಾಡಲಾಗಿದೆ.