ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಐ ಲವ್ ಮೊಹಮದ್ ಫ್ಲೆಕ್ಸ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೆಪ್ಟೆಂಬರ್ 24ರಂದು ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮಿನ ನಡುವೆ ಗಲಾಟೆ ನಡೆದಿದ್ದು, ಹಿಂದೂಗಳ ಮನೆಗಳ ಮೇಲೆ ಕಲ್ಲುತೂರಾಟ ನಡೆಸಲಾಗಿತ್ತು. ಈ ಬಗ್ಗೆ ನೂರು ಮಂದಿ ವಿರುದ್ಧ ಮೂರು ಎಫ್ಐಆರ್ ದಾಖಲಾಗಿದೆ. ಎರಡು ಕಡೆಯವರಿಂದ ಎಂಟು ಮಂದಿಯನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸಮಾಜದಲ್ಲಿ ಅಶಾಂತಿ ಮೂಡಿಸಲು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾರ್ಲ್ ಮಾರ್ಕ್ಸ್ ನಗರದಲ್ಲಿ ಘಟನೆ ಬಗ್ಗೆ ವದಂತಿ ಹರಡಿದರೆ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಎರಡು ಕೋಮಿನ ಮುಖಂಡರು, ನಾಗರಿಕರು ಸಹಕರಿಸಬೇಕು. ಜಾಲತಾಣಗಳಲ್ಲಿ ಪ್ರಚೋದನಾಕಾರಿ ಹೇಳಿಕೆ ಪೋಸ್ಟ್ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
ಫ್ಲೆಕ್ಸ್ ವಿಚಾರದಲ್ಲಿ ನಡೆದ ಗಲಾಟೆ ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.