2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಮುಂದಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ. 2389 ದರವನ್ನು ನಿಗದಿಪಡಿಸಲಾಗಿದೆ.
ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಿದ್ದು, ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ ಗಳಲ್ಲಿರುವ ಕೆಎಫ್‌ಸಿಎಸ್‌ಸಿ (KFCSC) ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ.
ಭತ್ತವನ್ನು ನೊಂದಾಯಿಸಿಕೊಳ್ಳಲು ಅ.31 ಕೊನೆಯ ದಿನಾಂಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಬೇಕು. ನ.1 ರಿಂದ ಫೆ 28 ರವರೆಗೆ ಭತ್ತವನ್ನು ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಸಿದ್ದಾರೆ.