ಬಾಗಲಕೋಟೆ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಅನಾಹುತಗಳು ಸಭವಿಸುತ್ತಿವೆ. ಧಾರಾಕಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ತಣದಲ್ಲಿ ಈ ದುರಂತ ಸಂಭವಿಸಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.