ಹೈದರಾಬಾದ್: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ರಣಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತೆಲಂಗಾಣದಲ್ಲಿ ವರುಣಾರ್ಭಟದಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ವಿಮಾನ ಹಾರಾಟ, ರೈಲು ಸಂಚಾರಗಳಲ್ಲಿ ವ್ಯತ್ಯಯವುಂಟಾಗಿದೆ. ಭಾರಿ ಮಳೆಯಿಂದಾಗಿ ವಿಮಾನ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
ಇನ್ನು ಹೈದರಾಬಾದ್ ನಲ್ಲಿ ಧಾರಾಕಾರ ಮಳೆಯಿಂದಾಜಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದು, ಪ್ರವಾಹದಂತೆ ನೀರು ಹರಿಯುತ್ತಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಉದ್ಯೋಗಿಗಳಿಗೆ ವರ್ಕ್ ಫ್ರಂ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.