ಮೈಸೂರು : ಕನ್ನಡದ ಖ್ಯಾತ ಸಾಹಿತಿ ಎಸ್. ಎಲ್ ಭೈರಪ್ಪನವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೆರವೇರಿಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿದೆ.
ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಸ್ಥಿ ವಿಸರ್ಜಿಸಿದರು.
ಹಿರಿಯ ಕನ್ನಡ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೆರವೇರಿತು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ .ಅಗಲಿದ ಸಾಹಿತಿಗೆ ಪೊಲೀಸರು 3 ಸುತ್ತು ಕುಶಾಲ ತೋಪು ಸಿಡಿಸಿ ಗೌರವ ಸಲ್ಲಿಸಿದರು.