ಬೆಂಗಳೂರು: ಬೆಂಗಳೂರಿನಲ್ಲಿ ಪೌಡಿರೌಡಿಗಳು ಅಟ್ಟಹಾಸ ಮೆರೆದು, ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಪುಡಿ ಮಾಡಿ, ವಾಹನಗಳನ್ನು ಜಖಂಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೊಂಡೆಕೊಪ್ಪದಲ್ಲಿ ಲಿಖಿತ್, ಜಯಂತ್ ಸೇರಿ ಒಟ್ಟು ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಲಾಂಗ್ ಬಿಸಿ ಗಾಜುಗಳನ್ನು ಪುಡಿಗೈದಿದ್ದರು.
ಅಲ್ಲದೇ ಮಾದನಾಯಕನಹಳ್ಳಿಯಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ, ಹಣ, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ದೃಶ್ಯಗಳು ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೀಗ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದೆ.