HomeLatest Newsನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ.06/10/2025 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಶಿಬಿರಾರ್ಥಿಗಳು ಸೆ. 30 ರಂದು ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8970476050, 9591514154, 9686248369, 8970446644, 9505894247 ಗಳನ್ನು ಸಂಪರ್ಕಿಸುವುದು .

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular