ಉಡುಪಿ : ಮನೆಗೆ ನುಗ್ಗಿ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಮನೆಗೆ ನುಗ್ಗಿ ಮಣಿಪಾಲದ ನಿವಾಸಿ ರೌಡಿಶೀಟರ್ ಸೌಫುದ್ದೀನ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸೌಫುದ್ದೀನ್ ಖಾಸಗಿ ಬಸ್ ಮಾಲೀಕನಾಗಿ ಕೆಲಸ ಮಾಡುತ್ತಿದ್ದನು. ಹಳೇ ದ್ವೇಷದ ಹಿನ್ನೆಲೆ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.