ಬೆಂಗಳೂರು: ರಾಜಧಾನಿ ಬೆಂಗಳೂರು ನಗರಕ್ಕೆ ಇಬ್ಬರು ಪೊಲೀಸ್ ಕಮಿಷನರ್ ನೇಮಕ ಮಾಡುವ ಕುರಿತು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂದು ಬದಲಾಯಿಸಲಾಗಿದ್ದು, ಐದು ಮಹಾನಗರ ಪಾಲಿಕೆಗಳನ್ನು ರಚಿಸಲಾಗಿದೆ. ಇದರ ಭಾಗವಾಗಿ ಬೆಂಗಳೂರು ಮಹಾನಗರಕ್ಕೆ ಇಬ್ಬರು ಪೊಲೀಸ್ ಕಮಿಷನರ್ ನೇಮಕ ಮಾಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೊಸದಾಗಿ ಮತ್ತೊಬ್ಬರು ಪೊಲೀಸ್ ಕಮಿಷನರ್ ಹುದ್ದೆ ಸೃಷ್ಟಿ, ಸಿಬ್ಬಂದಿ, ಖರ್ಚು- ವೆಚ್ಚ ಬಗ್ಗೆ ಅಧ್ಯಯನ ನಡೆಸಿದ್ದು, ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ಮತ್ತು ಪಿಎಸ್ಐ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿ ಹೆಚ್ಚಳ ಕುರಿತಂತೆ ಚರ್ಚೆ ನಡೆದಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.