ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಜನ ಪ್ರಜ್ಞಾಹೀನರಾಗಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿ, ನೂಕುನುಗ್ಗಲಿನಲ್ಲಿ 20 ಕ್ಕೂ ಹೆಚ್ಚು ಜನರು ಪ್ರಜ್ಞಾಹೀನರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.