BREAKING: ದಳಪತಿ ವಿಜಯ್ ರ್‍ಯಾಲಿ ವೇಳೆ ಕಾಲ್ತುಳಿತದಲ್ಲಿ 39 ಜನ ಸಾವು: ನ್ಯಾಯಾಂಗ ತನಿಖೆಗೆ ಆದೇಶ, ಮಾಹಿತಿ ಕೇಳಿದ ಗೃಹ ಸಚಿವಾಲಯ

ಚೆನ್ನೈ: ಶನಿವಾರ ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಭಾರಿ ದುರಂತ ಸಂಭವಿಸಿದ್ದು, 10 ಮಕ್ಕಳು ಮತ್ತು 17 ಮಹಿಳೆಯರು ಸೇರಿದಂತೆ 39 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ತಮಿಳುನಾಡು ಸರ್ಕಾರವು ಈಗ ಘಟನೆಯ ತನಿಖೆಗಾಗಿ ನ್ಯಾಯಮೂರ್ತಿ ಅರುಣಾ ಜಗದೀಶನ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಪ್ರತ್ಯೇಕವಾಗಿ, ಗೃಹ ಸಚಿವಾಲಯವು (MHA) ರಾಜ್ಯ ಸರ್ಕಾರಕ್ಕೆ ಕರೂರ್ ಕಾಲ್ತುಳಿತದ ಕಾರಣದ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಮತ್ತು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ತಡರಾತ್ರಿಯೇ ಕರೂರ್ ಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, ಮೃತರ ಕುಟುಂಬದವರಿಗೆ ಮುಖ್ಯಮಂತ್ರಿಗಳ ಪರಿಹಾರ ಧನದಿಂದ ಹತ್ತು ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. ಈ ಘಟನೆಯ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ತಿರುಮತಿ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ವಿಚಾರಣೆ ಆಯೋಗವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read