ಕರೂರ್: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಸಂಭವಿಸಿದ ಭಾರಿ ಕಾಲ್ತುಳಿದಲ್ಲಿ 10 ಮಕ್ಕಳು ಮತ್ತು 17 ಮಹಿಳೆಯರು ಸೇರಿದಂತೆ 39 ಜನ ಸಾವನ್ನಪ್ಪಿದ್ದಾರೆ. 70 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೊದಲ ಬಂಧನವಾಗಿದೆ. ಕರೂರ್ ಕಾಲ್ತುಳಿತ ದುರಂತದ ಬಗ್ಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಕರೂರ್ ಎಸ್ಪಿ, ಡಿಎಸ್ಪಿ, ಪೊಲೀಸ್ ಇನ್ಸ್ಪೆಕ್ಟರ್ ತಲೆದಂಡವಾಗುವ ಸಾಧ್ಯತೆ ಇದೆ.
ಈ ನಡುವೆ ಟಿವಿಕೆ ಪಕ್ಷದ ಮುಖಂಡ ಹಾಗೂ ಕಾರ್ಯದರ್ಶಿ ಮದಿಯಳಗನ್ ಅವರನ್ನು ಬಂಧಿಸಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಮದಿಯೊಳಗನ್ ಅವರನ್ನು ಬಂಧಿಸಲಾಗಿದೆ.