ರಾಮನಗರ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗವಾಗುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಲು ಈ ಯೋಜನೆಗಳಲ್ಲಿ ಕೆಲವು ಬದಲಾವಣೆ ಮಾಡಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಗ್ಯಾರಂಟಿ ಕಾರ್ಯಾಗಾರದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಅನ್ನಭಾಗ್ಯ ಯೋಜನೆಯಲ್ಲಿ ಪಡೆದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಶಕ್ತಿ ಯೋಜನೆಯಡಿ ಸರ್ಕಾರಿ ನೌಕರಿಯಲ್ಲಿರುವ ಮಹಿಳೆಯರು ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇಂತಹ ಪ್ರಕರಣಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಕೆಲವೊಂದು ಬದಲಾವಣೆ ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.