ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.
ಇರ್ಫಾನ್(25), ತರುಣ್(26), ರೇವಂತ್(27) ಮೃತಪಟ್ಟವರು ಎಂದು ಹೇಳಲಾಗಿದೆ. ಒಂದೇ ಬೈಕ್ ನಲ್ಲಿ ಮೂವರು ಯುವಕರು ತೆರಳುತ್ತಿದ್ದಾಗ ಅಪಘಾತ ಉಂಟಾಗಿದೆ. ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಮೃತಪಟ್ಟಿದ್ದಾರೆ. ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.