ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 39 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ನಡುವೆ ನಟ ದಳಪತಿ ವಿಜಯ್, ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.
ತಮಿಳುನಾಡು ಸಿಎಂ ಸ್ಟಾಲಿನ್ ಸರ್ಕಾರದ ವಿರುದ್ಧ ನಟ ವಿಜಯ್ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡು ಸರ್ಕಾರದ ಪಿತೂರಿಯಿಂದಲೇ ಕಾಲ್ತುಳಿತ ಸಂಭವಿಸಿದೆ. ವಿಶಾಲ ಮೈದಾನದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡಲಿಲ್ಲ. ಸ್ಟಾಲಿನ್ ಸರ್ಕಾರ ಸುರಕ್ಶಿತ ಪ್ರದೇಶವನ್ನು ನೀಡಿಲ್ಲ. ಇಕ್ಕಟ್ಟಿನ ಪ್ರದೇಶ ನೀಡಿದ್ದರಿಂದಲೇ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ ಎಂದು ಹೇಳಿದ್ದಾರೆ.
ಕಾಲ್ತುಳಿತದ ಹಿಂದೆ ಪಿತೂರು, ಷಡ್ಯಂತ್ರವಿದೆ. ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ನಟ ವಿಜಯ್ ಗಂಭೀರ ಆರೋಪ ಮಾಡಿದ್ದಾರೆ.