BREAKING: ಕೃಷ್ಣ ಮತ್ತು ಭೀಮಾ ನದಿ ತೀರದಲ್ಲಿ ಪ್ರವಾಹ ಸ್ಥಿತಿ: ತುರ್ತು ರಕ್ಷಣೆ ಹಾಗೂ ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುಲ್ಬರ್ಗ, ಬಿಜಾಪುರ ಯಾದಗಿರಿ ಸೇರಿದಂತೆ ಬೀದರ್ ಜಿಲ್ಲೆಗಳಲ್ಲಿ ಅಗತ್ಯ ತುರ್ತು ಕ್ರಮಕ್ಕೆ ನಾಲ್ಕೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, CEO ಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಸಿಎಂ ಸೂಚನೆಗಳು…

*ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು.

*ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು.

*ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು.

*ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

*ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read