ಚೆನ್ನೈ: ಕರೂರಿನಲ್ಲಿ ನಟ, ತಮಿಳಿಕ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್ ರ್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಮೃತಪಟ್ಟಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಎಫ್ಐಆರ್ ದಾಖಲಾಗಿದೆ.
ಈ ನಡುವೆ ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಪಕ್ಷ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ. ಕಾಲ್ತುಳಿತ ಪ್ರಕರಣದ ಬಗ್ಗೆ ಸ್ವತಂತ್ರವಾಗಿ ತನಿಖೆ ನಡೆಯಬೇಕು ಇಲ್ಲವೇ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅರ್ಜಿ ಸಲ್ಲಿಸಿದೆ.
ರ್ಯಾಲಿ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದಾಗಿ ನೂಕುನುಗ್ಗಕು ಉಂಟಾಗಿದೆ. ಇದರಿಂದ ಕಾಲ್ತುಳಿತ ದುರಂತ ಸಂಭವಿಸಿದೆ. ಕಾಲ್ತುಳಿತ ದುರಂತದ ಹಿಂದೆ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಟಿವಿಕೆ ಪಕ್ಷ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಾಳೆ ಮದ್ರಾಸ್ ಹೈಕೋರ್ಟ್ ಕೈಗೆತ್ತಿಕೊಳ್ಳಲಿದ್ದು, ನಾಳೆ ವಿಚಾರಣೆ ನಡೆಯಲಿದೆ.