ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಂಜಪ್ಪ (45) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಬೆಂಗಳೂರಿನ ನಾಗರಬಾವಿ ನಿವಾಸಿ. ವ್ಹೀಕೆಂಡ್ ಹಿನ್ನೆಲೆಯಲ್ಲಿ ನಂಜಪ್ಪ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಭನ್ನೇರುಘಟ್ಟ ಪಾರ್ಕ್ ಗೆ ಬಂದಿದ್ದರು. ಈ ವೇಳೆ ಸಫಾರಿಗೆ ತೆರಳಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ತಕ್ಷಣ ಅವರನ್ನು ಝೂ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.