ಶಿವಮೊಗ್ಗ: ಪ್ರವಾಸಿಗರ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಬಳಿಯ ಕೂರನಕೊಪ್ಪದ ಬಳಿ ನಡೆದಿದೆ.
ಬೆಂಗಳೂರಿನಿಂದ ಸಿಂಗದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಪ್ರವಾಸಿಗರು ತೆರಳುತ್ತಿದ್ದರು. ಬೆಂಗಳೂರಿನಿಂದ 12 ಜನ ಮಹಿಳೆಯರು ಸಾಗರಕ್ಕೆ ಆಗಮಿಸಿ ಅಲ್ಲಿಂದ ಟಿಟಿ ವಾಹನದಲ್ಲಿ ಸಿಗಂದೂರಿಗೆ ತೆರಳುತ್ತಿದ್ದರು. ಕೂರನಕೊಪ್ಪ ಬಳಿ ಟಿಟಿ ವಾಹನ ಪಲ್ಟಿಯಾಗಿದೆ.
12 ಜನ ಮಹಿಳೆಯರು ಗಾಯಗೊಂಡಿದ್ದಾರೆ. ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.