ಮೈಸೂರು: ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವಿಜಯನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು. ಒಡನಾಡಿ ಸಂಸ್ಥೆಯ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಗಳು ವಾಟ್ಸಪ್ ವಿಡಿಯೋ ಮೂಲಕ ಬಾಲಕಿಯರನ್ನು ತೋರಿಸಿದ್ದರು. 12-13 ವರ್ಷದ ಬಾಲಕಿ ತೋರಿಸಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಾಲಕಿಯರನ್ನು ರಕ್ಷಿಸಿದ್ದಾರೆ.