ಬೆಂಗಳೂರು: 2025-26ನೇ ಸಾಲಿನಲ್ಲಿ ವೃತ್ತಿ ಪ್ರೋತ್ಸಾಹ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ,
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ವ್ಯಾಪಾರ /ಉದ್ಯಮಗಳಿಗೆ ನೇರಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ, ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ ಮತ್ತು ಸ್ವಾಂತನ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ(ಅಂದರೆ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರಿಂದ ) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು.
ಆಸಕ್ತರು ವೆಬ್ ಸೈಟ್ www.kmdconline.karnataka.gov.in ನಲ್ಲಿ ಅಕ್ಟೋಬರ್ 16, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ (ಕೇಂದ್ರಿಯ ವಿಭಾಗ), ಕೊಠಡಿ ಸಂಖ್ಯೆ FF-29/37,1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು-560 002 ಅಥವಾ ದೂರವಾಣಿ ಸಂಖ್ಯೆ 080-22114815 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕೇಂದ್ರಿಯ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.