HomeLatest NewsBREAKING: 1.38 ಲಕ್ಷ ಪ್ರದೇಶದಲ್ಲಿ ಬೆಳೆಹಾನಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ: ಸಚಿವ...

BREAKING: 1.38 ಲಕ್ಷ ಪ್ರದೇಶದಲ್ಲಿ ಬೆಳೆಹಾನಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ: ಸಚಿವ ಎಂ.ಬಿ. ಪಾಟೀಲ್ ಮಾಹಿತಿ

ವಿಜಯಪುರ: ಭೀಮಾ ತೀರದ ಪ್ರವಾಹ ಬೇಡಿದ ಪ್ರದೇಶಗಳಿಗೆ ಸಚಿವ ಎಂ.ಬಿ. ಪಾಟೀಲ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ದೇವಣಗಾಂವ ಗ್ರಾಮದಲ್ಲಿ ನೆರೆಯಿಂದಾಗಿ ಬಹಳಷ್ಟು ಹಾನಿಯಾಗಿದೆ. ಗ್ರಾಮದ ಸೇತುವೆ ದುರಸ್ತಿ ಮಾಡಲಾಗುವುದು. ಬೆಳೆ ನಾಶದ ಬಗ್ಗೆ ಸಮೀಕ್ಷೆ ನಡೆಸಲಾಗುವುದು. ಬೆಳೆ ನಾಶದ ಕುರಿತು ಅಧಿಕಾರಿಗಳು ಗಮನಹರಿಸಲಿದ್ದಾರೆ. ಪ್ರವಾಹದಿಂದ 1.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಪ್ರವಾಹದ ಬಗ್ಗೆ ಸಿಎಂ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಆಲಮೇಲ ತಾಲ್ಲೂಕಿನ ದೇವಣಗಾಂವ ಗ್ರಾಮಕ್ಕೆ ಭೇಟಿನೀಡಿ, ಭೀಮಾನದಿ ಪ್ರವಾಹದಿಂದ ಹಾನಿ ಹಾಗೂ ಸುರಕ್ಷಿತ ಪ್ರದೇಶದಲ್ಲಿ ಸ್ಥಾಪನೆಯಾಗಿರುವ ಕಾಳಜಿ ಕೇಂದ್ರಕ್ಕೆ ತೆರಳಿ ನಿರಾಶ್ರಿತರಿಗೆ ಕಲ್ಪಿಸಲಾಗಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದೆ. ಇನ್ನಷ್ಟು ನೆರವು ಮತ್ತು ಸುಧಾರಿತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಸಗಿಯಲ್ಲಿ ಭೀಮಾನದಿ ಪ್ರವಾಹದಿಂದ ಹತ್ತಿ, ಈರುಳ್ಳಿ, ಕಬ್ಬು ಬೆಳೆಹಾನಿಯಾಗಿದ್ದು, ಸೂಕ್ತ ಪರಿಹಾರದ ಭರವಸೆ ನೀಡಲಾಗಿದೆ. ಭೀಮಾನದಿಯ ಪ್ರವಾಹಕ್ಕೆ ಆಲಮೇಲ ತಾಲ್ಲೂಕಿನ ಕುಮಸಗಿ ಗ್ರಾಮದಲ್ಲಿ ಹತ್ತಿ, ಈರುಳ್ಳಿ, ಕಬ್ಬು, ಮುಂತಾದ ಬೆಳೆಗಳ ಹಾನಿಯಾಗಿದ್ದು, ರೈತರ ಸಂಕಷ್ಟ ಆಲಿಸಿ, ಸೂಕ್ತ ಪರಿಹಾರವನ್ನು ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಸಿಂದಗಿ ಶಾಸಕ ಅಶೋಕ್ ಮುನಗೂಳಿ, ಜಿಲ್ಲಾಧಿಕಾರಿ ಡಾ. ಆನಂದ್, ಜಿಪಂ CEO ರಿಷಿ ಆನಂದ್ ಹಾಗೂ ಸಂಬಂಧಿತ ಅಧಿಕಾರಿಗಳು ಜೊತೆಗಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular