ಚೆನ್ನೈ: ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದ್ದು, ತಮಿಳುನಾಡಿನ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.
ಕರೂರಿನಲ್ಲಿ ನಡೆದ ಅವರ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 10 ಮಕ್ಕಳು, 17 ಮಹಿಳೆಯರು ಮತ್ತು 13 ಪುರುಷರು ಸೇರಿದಂತೆ 40 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಈ ಘಟನೆಯಿಂದ ತಮ್ಮ ಹೃದಯ ‘ಛಿದ್ರಗೊಂಡಿದೆ’ ಎಂದು ವಿಜಯ್ ಹೇಳಿದ್ದಾರೆ. ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು. “ನನ್ನ ಹೃದಯ ಛಿದ್ರವಾಗಿದೆ; ಪದಗಳಲ್ಲಿ ವ್ಯಕ್ತಪಡಿಸಲಾಗದ ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿ ನಾನು ನರಳುತ್ತಿದ್ದೇನೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ವಿಜಯ್ ಘೋಷಿಸಿದ್ದಾರೆ. ಇದಲ್ಲದೆ, ಗಾಯಾಳುಗಳಿಗೆ ತಲಾ 2 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ವಿಜಯ್ ಅವರ ಟಿವಿಕೆ ಪಕ್ಷವು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಕಾಲ್ತುಳಿತದ ಬಗ್ಗೆ ಕೇಂದ್ರ ತನಿಖಾ ದಳ(ಸಿಬಿಐ) ಅಥವಾ ಸ್ವತಂತ್ರ ತನಿಖೆಯನ್ನು ಕೋರಿದೆ.
VIDEO | Chennai: TVK leader Vijay receives bomb threat, squad arrives with sniffer dogs for thorough search at his Neelankarai residence.
— Press Trust of India (@PTI_News) September 28, 2025
(Full video available on PTI Videos – https://t.co/n147TvrpG7) pic.twitter.com/wG8GBMWTtm