ಬೆಂಗಳೂರು: ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ರಾತ್ರೋರಾತ್ರಿ ಬಿಟ್ಟು ಕಳುಹಿಸಿದ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದಡಿ ಹೈಗ್ರೌಂಡ್ಸ್ ಪೋಲಿಸ್ ಠಾಣೆಯ ಪಿಎಸ್ಐ ಉಮಾಶಂಕರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಇತ್ತೀಚೆಗೆ ತಾಜ್ ವೆಸ್ತೆಂಡ್ ಹೋಟೆಲ್ ನಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಈ ವೇಳೆ ಹೋಟೆಲ್ ನಲ್ಲಿದ್ದ ಫ್ರೆಂಚ್ ಎಂಬೆಸ್ಸಿ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಹೈಗ್ರೌಂಡ್ಸ್ ಠಾಣೆ ಪೊಲೀಸರು ಆ ಅಪರಿಚಿತ ವ್ಯಕ್ತಿಯನ್ನು ವಶಕ್ಕೆ ಪಡೆರು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ಆದರೆ, ಪ್ರಕರಣ ದಾಖಲಿಸದೆ ರಾತ್ರೋರಾತ್ರಿ ಬಿಟ್ಟು ಕಳುಹಿಸಿದ್ದರು.
ಫ್ರೆಂಚ್ ಎಂಬೆಸ್ಸಿ ಅಧಿಕಾರಿಗಳು ಆ ವ್ಯಕ್ತಿಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಿಸಿದಾಗ ಆ ಅಪರಿಚಿತ ವ್ಯಕ್ತಿಯನ್ನು ಠಾಣೆಯಿಂದ ಬಿಟ್ಟು ಕಳುಹಿಸಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಕರ್ತವ್ಯಲೋಪ ಆರೋಪದಡಿ ಪಿಎಸ್ಐ ಉಮಾಶಂಕರ್ ಅವರನ್ನು ಜಂಟಿ ಪೋಲಿಸ್ ಆಯುಕ್ತರು ಅಮಾನತು ಮಾಡಿದ್ದಾರೆ.