ಬೆಂಗಳೂರು: ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿ ಅತ್ಯಾಚಾರದ ಬೆದರಿಕೆ ಹಾಕಿದ ಆರೋಪದಡಿ ನಟ ದರ್ಶನ್ ಅಭಿಮಾನಿಗಳು ಎನ್ನಲಾದ 12 ಮಂದಿ ವಿರುದ್ಧ ಬೆಂಗಳೂರಿನ ಗೋವಿಂದರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಈ ಕುರಿತಾಗಿ ಅಜಿತ್ ಆನಂದ್ ಹೆಗಡೆ ದೂರು ನೀಡಿದ್ದು, ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಅಜಿತ್ ಅವರ ಪತ್ನಿ ಸರ್ಕಾರಿ ಶಾಲೆ ಶಿಕ್ಷಕಿಯಾಗಿದ್ದು, ಸಮೀಕ್ಷೆ ಕಾರ್ಯಕ್ಕೆ ಹೋಗಲು ಆಗದಂತಹ ಭಯದ ವಾತಾವರಣ ಸೃಷ್ಟಿಸಿದ್ದಾರೆ. ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಖದರ್ ಕನ್ನಡಿಗ ಫೇಸ್ಬುಕ್ ಪೇಜ್, ನವೀನ್ ನವೀನ್, ಹರೀಶ್ ನಾಯ್ಕ್, ಕೆಂಚ ತೂಗುದೀಪ, ಭೀಮ್ಸ್ ಬೋಸಾಯಂ, ಮ್ಯಾಕ್ಸ್ವೆಲ್ ಗೌತಮ್, ರವಿ ದರ್ಶನ್, ಪ್ರವೀಣ್ ಶೆಟ್ಟಿ, ಇಡ್ಲಿ ಸೋಮ, ರಮೇಶ್ ನಾಗಪ್ಪ, ಶಿವು ತೂಗುದೀಪ ಎನ್ನುವ ಖಾತೆಗಳಿಂದ ಅಶ್ಲೀಲ ಸಂದೇಶ ಕಳುಹಿಸಲಾಗಿದೆ ಎಂದು ದೂರು ನೀಡಲಾಗಿದೆ. 12 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.