ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆಗೆ ಗೈರಾದ ಶಿಕ್ಷಕರಿಗೆ ಬಿಗ್ ಶಾಕ್ ಎದುರಾಗಿದ್ದು, 9 ಮಂದಿ ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ.
ಸಮೀಕ್ಷೆ ಕಾರ್ಯ ನಿಧಾನವಾಗಿ ನಡೆಯುತ್ತಿದ್ದರಿಂದ ಬಹಳ ವೇಗವಾಗಿ ಸರ್ವೆ ಕಾರ್ಯ ನಡೆಯಬೇಕು ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದರು. ಆದರೂ ಕೆಲವರು ಶಿಕ್ಷಕರು ಸಮೀಕ್ಷೆಗೆ ಗೈರಾಗಿದ್ದರು. ಆದ್ದರಿಂದ ಒಟ್ಟು 9 ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ 8 ಸಿಬ್ಬಂದಿ ಹಾಗೂ ಕೊಪ್ಪಳದಲ್ಲಿ ಓರ್ವ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗಣತಿದಾರರಿಗೆ ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಆರಂಭದಲ್ಲಿ ಸ್ಪಲ್ಪ ತಾಂತ್ರಿಕ ಸಮಸ್ಯೆಯಾಗಿತ್ತು. ಈಗ ಅದೆಲ್ಲವನ್ನೂ ಬಗೆಹರಿಸಲಾಗಿದ್ದು, ಇಂದಿನಿಂದ ಸಮೀಕ್ಷೆ ಕಾರ್ಯ ಚುರುಕುಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಆರಂಭದಲ್ಲಿ ಸ್ಪಲ್ಪ ತಾಂತ್ರಿಕ ಸಮಸ್ಯೆಯಾಗಿತ್ತು. ಈಗ ಅದೆಲ್ಲವನ್ನೂ ಬಗೆಹರಿಸಲಾಗಿದ್ದು, ಇಂದಿನಿಂದ ಸಮೀಕ್ಷೆ ಕಾರ್ಯ ಚುರುಕುಗೊಳ್ಳಲಿದೆ. pic.twitter.com/bewHBYHB3I
— Siddaramaiah (@siddaramaiah) September 26, 2025