ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಲ್ಲಿ ಹಿಟ್ & ರನ್ ಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ನಡೆದಿದೆ.
ಬೂದಿಗೆರೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆ ಹಾಳಾಗಿದ್ದರಿಂದ ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು, ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ಲಾರಿ ಹರಿದು ಹೋಗಿದೆ. ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಟಿಪ್ಪರ್ ಚಾಲಕ ವಾಹನ ಸಮೇತ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.