ಮುಂಬೈ : ಚಿಕನ್ ಬೇಕು ಅಂತ ಹಠ ಹಿಡಿದ ಮಗನನ್ನೇ ತಾಯಿ ಲಟ್ಟಣಿಗೆಯಿಂದ ಹೊಡೆದು ಕೊಂದ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಈ ಘಟನೆ ನಡೆದಿದೆ. ಭಾನುವಾರ ಮಾಂಸಾಹಾರ ತಿನ್ನಲು ಒತ್ತಾಯಿಸಿದ್ದಕ್ಕೆ ತಾಯಿ ಏಳು ವರ್ಷದ ಮಗ ಹಾಗೂ ಮಗಳಿಗೆ ಲಟ್ಟಣಿಗೆಯಿಂದ ಹೊಡೆದಿದ್ದಾರೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದು, ಆತನ ಸಹೋದರಿ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಮೃತ ಚಿನ್ಮಯ್ ಧುಮ್ಡೆ ಎಂಬ ಬಾಲಕ ತನ್ನ ತಾಯಿ ಪಲ್ಲವಿ ಧುಮ್ಡೆಗೆ ಕೋಳಿ ಖಾದ್ಯ ತಿನ್ನಬೇಕೆಂದು ಹೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಹೊಡೆದು ಕೊಂದಳು ಎನ್ನಲಾಗಿದೆ. ನಂತರ ಲಟ್ಟಣಿಗೆಯಿಂದ ಹೊಡೆದು 10 ವರ್ಷದ ಮಗಳಿಗೆ ಹೊಡೆದಿದ್ದಾಳೆ. ಆಕೆ ಪ್ರಸ್ತುತ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಕಿರುಚಾಟ ಕೇಳಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದರು, ನಂತರ ಸ್ಥಳೀಯ ಪೊಲೀಸರು, ಸ್ಥಳೀಯ ಅಪರಾಧ ವಿಭಾಗ ಮತ್ತು ಉಪವಿಭಾಗಾಧಿಕಾರಿ ಸ್ಥಳಕ್ಕೆ ಧಾವಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪಾಲ್ಘರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪಾಲ್ಘರ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ದೇಶ್ಮುಖ್ ತಿಳಿಸಿದ್ದಾರೆ.