ಬೆಂಗಳೂರು : ಯಾವುದೇ ಕ್ಷಣದಲ್ಲಾದರು ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಯಾವುದೇ ಕ್ಷಣದಲ್ಲಾದರು ಸಚಿವ ಸಂಪುಟ ವಿಸ್ತರಣೆ ಆಗಬಹುದು, ಬಿ. ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.
ಬಾಣಂತಿಯರ ಸರಣಿಸಾವು
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿಸಾವು ಸಂಭವಿಸಿದ ಘಟನೆಯಲ್ಲಿ ಮೃತಪಟ್ಟ ನಾಲ್ಕು ಬಾಣಂತಿಯರ ಕುಟುಂಬಗಳಿಗೆ ಹಾಗೂ ಕೂಡ್ಲಿಗಿ ತಾಲ್ಲೂಕಿನಲ್ಲಿ ಅಪಘಾತ ಸೇರಿದಂತೆ ವಿವಿಧ ಸಂಕಷ್ಟಕ್ಕೆ ಒಳಗಾಗಿದ್ದ ಹಲವು ಕುಟುಂಬಗಳಿಗೆ ಅವರು ಪರಿಹಾರ ವಿತರಿಸಿದ್ದಾರೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿಸಾವು ಸಂಭವಿಸಿದ ಘಟನೆಯಲ್ಲಿ ಮೃತಪಟ್ಟ ನಾಲ್ಕು ಬಾಣಂತಿಯರ ಕುಟುಂಬಗಳಿಗೆ ಹಾಗೂ ಕೂಡ್ಲಿಗಿ ತಾಲ್ಲೂಕಿನಲ್ಲಿ ಅಪಘಾತ ಸೇರಿದಂತೆ ವಿವಿಧ ಸಂಕಷ್ಟಕ್ಕೆ ಒಳಗಾಗಿದ್ದ ಹಲವು ಕುಟುಂಬಗಳಿಗೆ ನಿನ್ನೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದೆ. ಇದರ ಪತ್ರಿಕಾ ವರದಿಗಳು.@CMofKarnataka pic.twitter.com/1R7hHpZq95
— B Z Zameer Ahmed Khan (@BZZameerAhmedK) September 28, 2025