ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ಶ್ರೀಲಂಕಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ ಬಂದಿದ್ದ ಮೂವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಶ್ರೀಲಂಕಾದ ಜಾಫ್ನಾದಿಂದ ಬೋಟ್ ಮೂಲಕ ತಮಿಳುನಾಡಿಗೆ ಬಂದು ಅಲ್ಲಿಂದ ರಾಮೇಶ್ವರಂ ಗೆ ಹೋಗಿದ್ದರು. ಬಳಿಕ ಸ್ಥಳೀಯ ವ್ಯಕ್ತಿಯೊಬ್ಬರ ಸಹಾಯ ಪಡೆದು ಬೆಂಗಳುರುಗೆ ಬಂದು ನೆಲೆಸಿದ್ದರು.
ಕಳೆದ ಒಂದು ವರ್ಷದಿಂದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಸಿಸಿಬಿ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಮೂವರನ್ನು ಬಂಧಿಸಲಾಗಿದೆ.