ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2025 ರಲ್ಲಿ ವಿತರಿಸಲಾದ ಎಸ್ಎಸ್ಎಲ್ಸಿ ಪರೀಕ್ಷೆ 1, 2 ಮತ್ತು 3ರ ಉತ್ತೀರ್ಣ ಅಂಕಪಟ್ಟಿಯಲ್ಲಿ ತಪ್ಪಾಗಿ ನಮೂದಾಗಿರುವ ಮಾಹಿತಿಗಳ ತಿದ್ದುಪಡಿಗೆ ಅಕ್ಟೋಬರ್ 20ರವರೆಗೆ ಅವಕಾಶ ನೀಡಲಾಗಿದೆ.
ಶಾಲಾ ಹಂತದಲ್ಲಿ ವಿದ್ಯಾರ್ಥಿಯ ಹೆಸರು, ತಂದೆ, ತಾಯಿಯ ಹೆಸರು, ಜನ್ಮ ದಿನಾಂಕ, ಲಿಂಗ, ಮಾಧ್ಯಮ ಮಾಹಿತಿಗಳು ತಪ್ಪಾಗಿದ್ದಲ್ಲಿ ನಿಗದಿಪಡಿಸಿದ ಶುಲ್ಕ ಪಾವತಿಸಿ ವಿದ್ಯಾರ್ಥಿಗಳು ತಿದ್ದುಪಡಿ ಮಾಡಿಕೊಳ್ಳಬಹುದು.
ಈಗಾಗಲೇ ಅಂಕಪಟ್ಟಿಗಳನ್ನು ಮಂಡಳಿಯು ಬಿಇಒ ಕಚೇರಿಗೆ ಕಳುಹಿಸಿದೆ. ಶಾಲೆಯಲ್ಲಿ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ತಕ್ಷಣ ವಿತರಿಸಲು ಸೂಚಿಸಲಾಗಿದೆ. ಯಾವುದೇ ಮಾಹಿತಿ ತಪ್ಪಾಗಿದ್ದರೆ ಅಕ್ಟೋಬರ್ 22 ವರೆಗೆ ಬದಲಾವಣೆ ಮಾಡಿಕೊಂಡು ಪರಿಷ್ಕೃತ ಅಂಕ ಪಟ್ಟಿ ಪಡೆದುಕೊಳ್ಳಬಹುದು.
ಅಂಕಪಟ್ಟಿ ಮಾಹಿತಿ ತಿದ್ದುಪಡಿಗೆ 200 ರೂಪಾಯಿ ಶುಲ್ಕ ನಿಗದಿ ಮಾಡಲಾಗಿದೆ. ಕಡ್ಡಾಯವಾಗಿ ಶಾಲಾ ಮುಖ್ಯ ಶಿಕ್ಷಕರೇ ಮಂಡಳಿಯ ನೆಫ್ಟ್ ಚಲನ್ ಮೂಲಕ ಶುಲ್ಕ ಪಾವತಿಸುವಂತೆ ತಿಳಿಸಲಾಗಿದೆ.