HomeLatest Newsಮುಡಾ ನಿವೇಶನ ಹಗರಣ: ಮಾಜಿ ಆಯುಕ್ತ ದಿನೇಶ್ ಗೆ 14 ದಿನ ನ್ಯಾಯಾಂಗ ಬಂಧನ

ಮುಡಾ ನಿವೇಶನ ಹಗರಣ: ಮಾಜಿ ಆಯುಕ್ತ ದಿನೇಶ್ ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ಸಂಬಂಧ ಬಂಧನಕ್ಕೆ ಒಳಗಾದ ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಮೂರು ದಿನಗಳ ಇಡಿ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ದಿನೇಶ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ನ್ಯಾಯಾಲಯ ದಿನೇಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಮುಡಾ ಹಗರಣ ಸಂಬಂಧ ನೋಟಿಸ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಂದು ಇಡಿ ಕಚೇರಿಗೆ ಹಾಜರಾಗಿದ್ದ ದಿನೇಶ್ ಅವರನ್ನು ರಾತ್ರಿಯವರೆಗೂ ವಿಚಾರಣೆ ನಡೆಸಿದ ಇಡಿ ಬಂಧಿಸಿತ್ತು.

ಬಿ ರಿಪೋರ್ಟ್ ತಿರಸ್ಕರಿಸಲು ಮನವಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ವಿರುದ್ಧ ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 8ಕ್ಕೆ ಆದೇಶ ಕಾಯ್ದೆಸಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಯ ಕುರಿತು ಸೋಮವಾರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಅಕ್ಟೋಬರ್ 8ರಂದು ಅಂತಿಮ ಆದೇಶ ನೀಡುವುದಾಗಿ ತಿಳಿಸಿದೆ.

ಸಿದ್ದರಾಮಯ್ಯ ಕುಟುಂಬ ಅಕ್ರಮವಾಗಿ 14 ನಿವೇಶನ ಪಡೆದಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಲ್ಲಿಸಿದ ಬಿ ರಿಪೋರ್ಟ್ ತಿರಸ್ಕರಿಸಬೇಕು. ಪ್ರಕರಣದ ತನಿಖಾಧಿಕಾರಿಯಾಗಿರುವ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಅವರನ್ನು ಬದಲಾವಣೆ ಮಾಡಬೇಕೆಂದು ಸ್ನೇಹಮಯಿ ಕೃಷ್ಣ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular