HomeLatest Newsಸರ್ಕಾರಿ ನೌಕರರು, ಕುಟುಂಬದವರಿಗೆ ನಗದು ರಹಿತ ಚಿಕಿತ್ಸೆ: ಅ.1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

ಸರ್ಕಾರಿ ನೌಕರರು, ಕುಟುಂಬದವರಿಗೆ ನಗದು ರಹಿತ ಚಿಕಿತ್ಸೆ: ಅ.1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.1 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.

ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.

ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.18 ರೊಳಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಗೆ ರಾಜ್ಯ ಸಕಾರದ ಎಲ್ಲಾ ಅಧಿಕಾರಿ/ನೌಕರರು IಖಒS-1 ರಲ್ಲಿ ನೋಂದಣಿ ಮಾಡಿಕೊಳ್ಳಲು ಕ್ರಮವಹಿಸುವುದು.

ಈ ಮೇಲಿನ ಅಂಶಗಳನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular