HomeLatest Newsರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 'ಶುಲ್ಕ ಮರುಪಾವತಿ' ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ...

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಶುಲ್ಕ ಮರುಪಾವತಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು :  ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಅ.31 ಕ್ಕೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in/ ಈ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಬೇಕಾಗಿ ತಿಳಿಸಲಾಗಿದೆ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಮತ್ತು ಇಮೇಲ್ 8050770005 [email protected], ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇಮೇಲ್ [email protected] ಮತ್ತು ಸಹಾಯವಾಣಿ ಸಂಖ್ಯೆ 1902 ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular