ಕರೂರು(ತಮಿಳುನಾಡು): ಟಿವಿಕೆ ಪಕ್ಷದ ಅಧ್ಯಕ್ಷರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂನ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ರಾತ್ರಿ ತಿಳಿಸಿದ್ದಾರೆ.
ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿ 60 ಜನರು ಗಾಯಗೊಂಡ ಘಟನೆಯಲ್ಲಿ ಎಫ್ಐಆರ್‌ನಲ್ಲಿ ಹೆಸರಿಸಲಾದ ಮೂವರು ಟಿವಿಕೆ ಪದಾಧಿಕಾರಿಗಳಲ್ಲಿ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ. ಮತಿಯಾಳಗನ್ ಕೂಡ ಒಬ್ಬರು.
ಟಿವಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್ ಮತ್ತು ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಇತರ ಇಬ್ಬರು ಪಕ್ಷದ ಪದಾಧಿಕಾರಿಗಳಾಗಿದ್ದಾರೆ.