ಬೆಂಗಳೂರು: ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ- ಜಾತಿಗಣತಿ ಆರಂಭವಾಗಿದ್ದು, ನಿಗದಿತ ಸಮಯದೊಳಗೆ ಸಮೀಕ್ಷೆ ಮುಗಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸಮೀಕ್ಷೆಯಿಂದ ದಾಖಲೆಗಳು ದುರ್ನಳಕೆಯಾಗಲಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿ, ಸಮೀಕ್ಷೆ ಮೂಲಕ ಸಮುದಾಯಗಳ ಸ್ಥಿತಿಗತಿ ಗೊತ್ತಾಗುತ್ತದೆ. ಸಮೀಕ್ಷೆಯಿಂದ ಇನ್ನೇನು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯ? ಕೇಂದ್ರ ಸರ್ಕಾರ ಕೂಡ ಜಾತಿಗಣತಿ ನಡೆಸುತ್ತಿದೆ. ಇದನ್ನು ಬಿಜೆಪಿಯವರು ಅರ್ಥಮಾಡಿಕೊಳ್ಳಬೇಕು ಎಂದರು.