ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಲ್ಲಿ ಶಿಶು ಅಭಿವೃದ್ಧಿ ಅಭಿಯೋಜನಾಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಅಧಿಕಾರಿಗಳಿಗೆ ಹಲವು ತಿಂಗಳಿಂದ ಈರೀತಿ ಬೆದರಿಕೆ ಕರೆಗಳು ಬರುತ್ತಿವೆ. ರಾಮನಗರ ಲೋಕಾಯುಕ್ತ ಡಿವೈಎಸ್ ಪಿ ಶಿವಪ್ರಸಾದ್ ಹೆಸರಲ್ಲಿ ಮಾಗಡಿ ತಾಲೂಕು ಶಿಶು ಅಭಿವೃದ್ಧಿ ಅಭಿಯೋಜನಾಧಿಕಾರಿ ಬಿ.ಎಲ್.ಸುರೇಂದ್ರಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಕಚೇರಿ ಮೇಲೆ ದಾಳಿ ನಡೆಸುತ್ತೇವೆ ಎಂದು ನಿರಂತರವಾಗಿ ಬೆದರಿಕೆ ಹಾಕಲಾಗುತ್ತಿದೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಐಜೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.
You Might Also Like
TAGGED:ಲೋಕಾಯುಕ್ತ ಬೆದರಿಕೆ ಕರೆ