ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದಾರೆ. ರಸ್ತೆಗುಂಡಿಗಳನ್ನು ಮುಚ್ಚುತ್ತಿರುವ ಅಧಿಕಾರಿಗಳ ಕಾರ್ಯವೈಖರಿಯನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ.
ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟಿ ರೌಂಡ್ ಹಾಕಿ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ಪರಿಶೀಲನೆ ನಡೆಸಿದ್ದರು. ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಟಿ ರೌಂಡ್ಸ್ ನಡೆಸಿದ್ದಾರೆ. ಚಾಲುಕ್ಯ ಸರ್ಕಲ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಿನ್ಸ್ ಸ್ಕ್ವೇರ್ ರಸ್ತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.