ಮಂಡ್ಯ: ನಾಪತ್ತೆಯಾಗಿರುವ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಅಧಿಕಾರಿಯ ಸುಳಿವು ಈವರೆಗೂ ಸಿಕ್ಕಿಲ್ಲ. ಆದರೆ ಕೆರೆ ಏರಿ ಮೇಲೆ ಅವರ ಬೈಕ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಜಯರಾಮ್ ನಿನ್ನೆ ಬೆಳಿಗ್ಗೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಇದೀಗ ಅವರ ಬೈಕ್ ಕೆ.ಆರ್.ಪೇಟೆಯ ದೇವೀರಮ್ಮಟ್ಟಿ ಕೆರೆ ಏರಿ ಮೇಲೆ ಪತ್ತೆಯಾಗಿದೆ.
ಕೆರೆ ಏರಿ ಮೇಲೆ ಬೈಕ್ ಪತ್ತೆಯಾಗಿದ್ದು, ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.