ಬೆಂಗಳೂರು : ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯ ಒದಗಿಸುವುದಕ್ಕಾಗಿ ʼಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯ ಒದಗಿಸುವುದಕ್ಕಾಗಿ ʼಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಇದು ನೈಜ ದತ್ತಾಂಶವನ್ನು ಒದಗಿಸುತ್ತದೆ. ಅಲ್ಲದೇ, ಆರ್ಥಿಕ ಇಲಾಖೆಯ ಖಜಾನೆ – 2 ತಂತ್ರಾಂಶದೊಂದಿಗೆ ಜೋಡಣೆ ಮಾಡಲಾಗಿದೆ. ಸಮಗ್ರ ಭೂಸ್ವಾಧೀನ ವ್ಯವಸ್ಥೆಯು ರಾಜ್ಯಾದ್ಯಂತ ಭೂಸ್ವಾಧೀನ ಪ್ರಕ್ರಿಯೆಯನ್ನು ಸಮನ್ವಯಗೊಳಿಸುತ್ತದೆ. ಅಲ್ಲದೇ, ಈಗ ಕೈಗೊಳ್ಳಲಾಗುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಮತ್ತು ಹಿಂದೆ ನಡೆಸಿದ ಭೂಸ್ವಾಧೀನ ಪ್ರಕರಣಗಳಲ್ಲಿನ ಮೊಕದ್ದಮೆಗಳನ್ನು ಗುರುತಿಸುವ ಸಮಗ್ರ ಡಿಜಿಟಲ್ ವೇದಿಕೆಯೂ ಇದಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯ ಒದಗಿಸುವುದಕ್ಕಾಗಿ ʼಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಇದು ನೈಜ ದತ್ತಾಂಶವನ್ನು ಒದಗಿಸುತ್ತದೆ. ಅಲ್ಲದೇ, ಆರ್ಥಿಕ ಇಲಾಖೆಯ ಖಜಾನೆ – 2 ತಂತ್ರಾಂಶದೊಂದಿಗೆ ಜೋಡಣೆ ಮಾಡಲಾಗಿದೆ. ಸಮಗ್ರ ಭೂಸ್ವಾಧೀನ ವ್ಯವಸ್ಥೆಯು ರಾಜ್ಯಾದ್ಯಂತ ಭೂಸ್ವಾಧೀನ ಪ್ರಕ್ರಿಯೆಯನ್ನು… pic.twitter.com/2XuWHekiZf
— DIPR Karnataka (@KarnatakaVarthe) September 30, 2025