2025-26 ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ಚಾಲಿತ ಹೊಲಿಗೆ ಯಂತ್ರ, ಬಡಗಿತನ, ಗೌಂಡಿ, ಕಮ್ಮಾರಿಕೆ, ಕ್ಷೌರಿಕ ಮತ್ತು ಧೋಬಿ ಸುಧಾರಿತ ಉಪಕರಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಗ್ರಾಮೀಣ ಭಾಗದ ಕುಶಲಕರ್ಮಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಫಲಾನುಭವಿಗಳು 18 ವರ್ಷದಿಂದ 35 ವರ್ಷಗಳ ಒಳಗಡೆ ಇರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು 18 ರಿಂದ 38 ವರ್ಷಗಳ ಒಳಗಡೆ ಇರುವ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಬಡಗಿತನ, ಗೌಂಡಿ, ಕಮ್ಮಾರಿಕೆ, ಕ್ಷೌರಿಕ ಮತ್ತು ಧೋಬಿ ಸುಧಾರಿತ ಉಪಕರಣಗಳಿಗೆ ಅರ್ಜಿ ಸಲ್ಲಿಸುವ ಫಲಾನುಭವಿಗಳು 18 ವರ್ಷ ಮೇಲ್ಪಟ್ಟಿರಬೇಕು.
ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 30, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2324798 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಕೈಗಾರಿಕಾ ವಿಭಾಗದ ಉಪ ನಿರ್ದೇಶಕರು (ಗ್ರಾಕೈ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.