ಕೊಡಗು ಜಿಲ್ಲೆಯಲ್ಲಿ ದಸರಾ ಮತ್ತು ಆಯುಧಪೂಜೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಅಕ್ಟೋಬರ್, 01 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸುಂಟಿಕೊಪ್ಪ, ಕೊಡಗರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಅಕ್ಟೋಬರ್, 03 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
Latest News
