ಬೆಂಗಳೂರು: ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮಡಿವಾಳದ ಸಿದ್ದಾರ್ಥ ಕಾಲೋನಿಯಲ್ಲಿ ಘಟನೆ ನಡೆದಿದೆ.
ಲಾಲ್ ಮದನ್(33), ರಜಾವುದ್ದಿನ್(30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಹಾಕಲು ಸುಮಾರು 20 ಅಡಿಗಳಷ್ಟು ಮಣ್ಣು ತೆಗೆಯಲಾಗಿತ್ತು. ಪಿಲ್ಲರ್ ಗಾಗಿ 20 ಅಡಿಗೂ ಹೆಚ್ಚು ಮಣ್ಣು ತೆಗೆದಿದ್ದು ಕೆಳಗೆ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರ ಮೇಲೆ ದಿಢೀರ್ ಮಣ್ಣು ಬಿದ್ದಿದೆ.
ಮೂವರು ಕಾರ್ಮಿಕರ ಮೇಲೆ ದಿಢೀರ್ ಮಣ್ಣು ಕುಸಿತವಾಗಿದ್ದರಿಂದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಮಡಿವಾಳ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.