ಮನಿಲಾ: ಫಿಲಿಪ್ಪೀನ್ಸ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.
ಫಿಲಿಪ್ಪೀನ್ಸ್ ನಲ್ಲಿ 6.9ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಮಧ್ಯ ವಿಸಯಾಸ್ ಪ್ರಾಂತ್ಯದಲ್ಲಿ ಅತಿಹೆಚ್ಚು ಹಾನಿ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಧರೆಗುರುಳಿವೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿ 69 ಜನರು ಸಾವನ್ನಪ್ಪಿದ್ದಾರೆ. ಹಲವರು ಅವಶೇಷಗಳಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ
ಭೂಕಂಪದಲ್ಲಿ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭೂಮಿಯ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.