BIG NEWS: ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾದ ರಾಜ್ಯ ಸರ್ಕಾರದ ಶಕ್ತಿ ಯೋಜನೆ

ಬೆಂಗಳೂರು: ಕರ್ನಾಟಕ ಸರ್ಕಾರ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಹೊಸ ವಿಶ್ವದಾಖಲೆ ಬರೆದಿದೆ. 500 ಕೋಟಿ ಮಹಿಳೆಯರ ಉಚಿತ ಪ್ರಯಾಣದೊಂದಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಪ್ರಶಸ್ತಿಗೆ ಭಾಜನವಾಗಿದೆ.

ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಸೇರಿದಂತೆ ನಾಲ್ಕು ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಹಾಗೂ ಪ್ರಯಾಣಿಕರಿಗೆ ಸಚಿವ ರಾಮಲಿಂಗಾರೆಡ್ಡಿ ಧವ್ಯವಾದ ತಿಳಿಸಿದ್ದಾರೆ. ಮಹಿಳೆಯರರನ್ನು ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ. ಶಕ್ತಿ ಯೋಜನೆ ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸಿದೆ. ಇದೀಗ ಶಕ್ತಿ ಯೋಜನೆ ಮತ್ತೊಂದು ವಿಶ್ವದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆ ವಿಶ್ವ ದಾಖಲೆಗೆ ಸೇರ್ಪಡೆ ಬಗ್ಗೆ ಕೆ.ಎಸ್.ಆರ್.ಟಿ.ಸಿ ಕೂಡ ಮಾಹಿತಿ ನೀಡಿದೆ. ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ 2023 ಜೂನ್ 11ರಂದು ಪ್ರಾರಂಭಿಸಿದ್ದ ಶಕ್ತಿ ಯೋಜನೆ ಅಡಿಯಲ್ಲಿ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಎನ್ ಡಬ್ಲ್ಯೂ ಕೆ ಎಸ್ ಆರ್ ಟಿಸಿ ಮತ್ತು ಕೆಕೆ ಆರ್ಟಿಸಿ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಉಚಿತವಾಗಿ ಮಹಿಳೆಯರು. ಈವರೆಗೆ 500 ಕೋಟಿ ರೂ ಗೂ ಹೆಚ್ಚು ಪ್ರಯಾಣ ಮಾಡಿದ್ದಾರೆ ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read