ಬೆಂಗಳೂರು: ರಾಗಿ, ಜೋಳ, ಭತ್ತಕ್ಕೆ ಬೆಂಬಲ ಬೆಲೆಯನ್ನು ಸರ್ಕಾರ ಈಗಾಗಲೇ ನಿಗದಿಪಡಿಸಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಪ್ರತಿ ಕ್ವಿಂಟಲ್ ಗೆ 100ರಿಂದ 500 ರೂ.ವರೆಗೆ ದರ ಹೆಚ್ಚಳ ಮಾಡಿ ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ.
ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಬೇಕೆನ್ನುವ ಉದ್ದೇಶದಿಂದ ಸರ್ಕಾರ ಬೆಂಬಲ ಬೆಲೆ ನೀಡಿದ್ದು, ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ 50 ಕ್ವಿಂಟಾಲ್ ಭತ್ತ ಖರೀದಿಸಲು ನಿಗದಿಪಡಿಸಿದೆ.
ರಾಗಿಯನ್ನು ಪ್ರತಿ ರೈತರಿಂದ ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಠ 50 ಕ್ವಿಂಟಾಲ್ ಖರೀದಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಬಿಳಿ ಜೋಳವನ್ನು ಪ್ರತಿ ರೈತರಿಂದ ಎಕರೆಗೆ 15 ಕ್ವಿಂಟಾಲ್ ನಂತೆ ಗರಿಷ್ಠ 150 ಕ್ವಿಂಟಾಲ್ ವರೆಗೆ ಖರೀದಿಸಲಾಗುವುದು.
ರಾಗಿ ಪ್ರತಿ ಕ್ವಿಂಟಲ್ ಗೆ 4886 ರೂ., ಭತ್ತ ಸಾಮಾನ್ಯ 2369 ರೂ., ಬಿಳಿ ಜೋಳ 3699 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎನ್ನಲಾಗಿದೆ.