HomeLatest NewsBREAKING: ಭೀಕರ ಸರಣಿ ಅಪಘಾತ, ಓರ್ವ ಸ್ಥಳದಲ್ಲೇ ಸಾವು; ನಾಲ್ವರಿಗೆ ಗಂಭೀರ ಗಾಯ

BREAKING: ಭೀಕರ ಸರಣಿ ಅಪಘಾತ, ಓರ್ವ ಸ್ಥಳದಲ್ಲೇ ಸಾವು; ನಾಲ್ವರಿಗೆ ಗಂಭೀರ ಗಾಯ

ಕಾರವಾರ‍: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದ ತಿನೈಘಾಟ್ ಬಳಿ ಈ ದುರಂತ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸರಣಿ ಅಪಘಾತ ಸಂಭವಿಸಿದ್ದು, ನಾಲ್ಕು ವಾಹನಗಳು ಜಖಂಗೊಂಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್ ನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿ ಓವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular